Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:3 - ಕನ್ನಡ ಸತ್ಯವೇದವು C.L. Bible (BSI)

3 ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದುಸ್ರ್ಯಾಂದಿಸಿ ಅಮಿ ಸಿದೊನ್ ಮನ್ತಲ್ಯಾ ಶಾರಾಕ್ ಪಾವ್ಲಾಂವ್, ಜುಲಿಯಸ್ ಪಾವ್ಲುಚ್ಯಾ ವಿಶಯಾತ್ ಕಾಳ್ಜಿಚೊ ಮಾನುಸ್ ಹೊಲ್ಲೊ, ಪಾವ್ಲುಕ್ ಅಪ್ಲ್ಯಾ ವಾಂಗ್ಡಿಯಾಕ್ನಿ ಭೆಟುಕ್ ತೆನಿ ಒಪ್ಕಿ ದಿಲ್ಯಾನ್, ತನ್ನಾ ತೆಚ್ಯಾ ವಾಂಗ್ಡಿಯಾನಿ ತೆಚ್ಯಾ ಗರ್ಜೆಚೆ ಪಾಜೆ ಹೊಲ್ಲೆ ಸಗ್ಳೆ ತೆಕಾ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:3
12 ತಿಳಿವುಗಳ ಹೋಲಿಕೆ  

ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.


“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು