Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:4 - ಕನ್ನಡ ಸತ್ಯವೇದವು C.L. Bible (BSI)

4 ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಲ್ಲಿಂದ ಹೊರಟು ಎದುರು ಗಾಳಿ ಬೀಸುತ್ತಿದ್ದದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮಿ ಸಿದೊನ್ ಶಾರಾಕ್ನಾ ಜಾವ್ಕ್ ಲಾಗ್ಲಾಂವ್, ಇದ್ರಾಕ್ ವಾರೊ ಮಾರುಲಾಗಲ್ಯಾ ಸಾಟ್ನಿ ಅಮಿ ಸೈಪ್ರಸ್ ಮನ್ತಲ್ಯಾ ದ್ಪಿಪಾಚ್ಯಾ ಜಗ್ಗೊಳ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:4
10 ತಿಳಿವುಗಳ ಹೋಲಿಕೆ  

ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.


ನಾವು ಅನೇಕ ದಿನಗಳವರೆಗೆ ನಿಧಾನವಾಗಿ ಪ್ರಯಾಣಮಾಡಿದೆವು. ಅತಿ ಕಷ್ಟದಿಂದ ‘ಸ್ನೀಡ’ ಎಂಬ ಊರಿಗೆ ಎದುರಾಗಿ ಬಂದೆವು. ಆ ದಿಸೆಯಲ್ಲಿ ಪ್ರಯಾಣಮಾಡಲು ಎದುರುಗಾಳಿ ನಮ್ಮನ್ನು ಬಿಡಲಿಲ್ಲ. ಆದ್ದರಿಂದ ನಾವು ಸಾಲ್ಮೋನೆ ಭೂಶಿರವನ್ನು ದಾಟಿ, ಕ್ರೇಟ್ ದ್ವೀಪದ ಮರೆಯನ್ನು ಸೇರಿದೆವು.


ಸೆಜರೇಯ ಪಟ್ಟಣದಿಂದ ಕೆಲವು ಶಿಷ್ಯರು ನಮ್ಮೊಡನೆ ಬಂದರು. ನಾವು ತಂಗಲಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ಅವರು ನಮ್ಮನ್ನು ಕರೆದುಕೊಂಡು ಹೋದರು. ಈ ಮ್ನಾಸೋನನು ಆದಿಶಿಷ್ಯರಲ್ಲಿ ಒಬ್ಬನಾಗಿದ್ದನು.


ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.


ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.


ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.


ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.


ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು