Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:40 - ಕನ್ನಡ ಸತ್ಯವೇದವು C.L. Bible (BSI)

40 ಎಂದೇ ಹಗ್ಗಗಳನ್ನು ಕತ್ತರಿಸಿ ಲಂಗರುಗಳನ್ನು ಸಮುದ್ರದಲ್ಲೇ ಮುಳುಗಲೆಂದು ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಲಾದ ಹಗ್ಗಗಳನ್ನು ಬಿಚ್ಚಿದರು. ಅನಂತರ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ಚಲಿಸಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಲಂಗರಗಳನ್ನು ಸರಿದು ಸಮುದ್ರದಲ್ಲೇ ಬಿಟ್ಟು ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದ್ದರಿಂದ ಅವರು ಚುಕ್ಕಾಣಿಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತಸೆ ಹೊವ್ನ್, ತೆನಿ ಢೊನಾಚಿ ದಿಕ್ಕಾ ಬದಲ್ತಲ್ಯಾ ಗೊಕ್ಕ್ಯಾಕ್ ಧರುನ್ ಘೆಟಲ್ಲ್ಯಾ ಧೊರ್ಯಾಕ್ನಿ ಕಾಪುನ್ ಟಾಕ್ಲ್ಯಾನಿ ಅನಿ ಫಿಡ್ಲ್ಯಾ ಭಾಜುಚ್ಯಾ ಢೊನಾಕ್ ಭಾಂದಲ್ಲಿ ಫಾಳಿ ಉಕ್ಲುಕ್ ವಾರ್ಯ್ಯಾಕ್ ಬಾಂದುನ್ ದಂಡೆಕ್ಡೆ ಜಾವ್ಕ್ ಲಾಗ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:40
5 ತಿಳಿವುಗಳ ಹೋಲಿಕೆ  

ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.


ಹಡಗಿನವರು ಅದನ್ನು ಮೇಲಕ್ಕೆ ಎಳೆದು ಹಗ್ಗಗಳಿಂದ ಹಡಗಿನ ಅಡಿಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಅನಂತರ ‘ಸುರ್ತಿಸ್’ ಎಂಬ ಉಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.


ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು