Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:42 - ಕನ್ನಡ ಸತ್ಯವೇದವು C.L. Bible (BSI)

42 ಕೈದಿಗಳಲ್ಲಿ ಯಾರೂ ಈಜಿ ತಲೆತಪ್ಪಿಸಿಕೊಳ್ಳದಂತೆ ಅವರನ್ನು ಕೊಲ್ಲಬೇಕೆಂದು ಸೈನಿಕರು ಆಲೋಚನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬದಾಗಿ ಆಲೋಚನೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಎಕ್ ಚೊರ್ಬಿ ಚುಕ್ವುನ್ ಘೆವ್ನ್ ಜಾವ್ಕ್ ನಾ ಮನುನ್ ಸೈನಿಕಾನಿ ತೆಂಕಾ ಜಿವ್ ಕಾಡುಚೆ ಮನುನ್ ಚಿಂತಲ್ಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:42
9 ತಿಳಿವುಗಳ ಹೋಲಿಕೆ  

ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು