Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:10 - ಕನ್ನಡ ಸತ್ಯವೇದವು C.L. Bible (BSI)

10 ಅವರೆಲ್ಲರು ನಮ್ಮನ್ನು ಹಲವಾರು ವಿಧದಲ್ಲಿ ಬಹುಮಾನಿಸಿದರು; ಮಾತ್ರವಲ್ಲ, ನಾವು ಅಲ್ಲಿಂದ ನೌಕಾಯಾನವನ್ನು ಮುಂದುವರಿಸಿದಾಗ, ನಮಗೆ ಅವಶ್ಯವಾದುದೆಲ್ಲವನ್ನು ತಂದು ಹಡಗಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ ನಾವು ಬಿಟ್ಟು ಹೊರಟಾಗ ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯಾ ದ್ವಿಪಾತ್ಲ್ಯಾ ಲೊಕಾನಿ ಅಮ್ಕಾ ಭೊಮಾನಾ ದಿಲ್ಯಾನಿ, ಅಮಿ ಥೈತ್ನಾ ಜಾವ್ಕ್ ತಯಾರ್ ಹೊಲ್ಲ್ಯಾ ತನ್ನಾ ತೆನಿ ಅಮ್ಕಾ ಪಾಜೆ ಹೊಲ್ಲಿ ಸಗ್ಳ್ಯಿ ಸಾಮಾನಾ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:10
15 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು.


ಈಗಾಗಲೇ ಮೂರು ತಿಂಗಳು ಕಳೆದಿದ್ದವು. ಅಲೆಕ್ಸಾಂಡ್ರಿಯಕ್ಕೆ ಸೇರಿದ ‘ಅಶ್ವಿನಿ’ ಎಂಬ ಹಡಗೊಂದು ಚಳಿಗಾಲದ ನಿಮಿತ್ತ ಅಲ್ಲಿ ಲಂಗರುಹಾಕಿತ್ತು. ನಾವು ಅದನ್ನು ಹತ್ತಿ ಪ್ರಯಾಣ ಮುಂದುವರಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು