ಅಪೊಸ್ತಲರ ಕೃತ್ಯಗಳು 28:17 - ಕನ್ನಡ ಸತ್ಯವೇದವು C.L. Bible (BSI)17 ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ. ಅಧ್ಯಾಯವನ್ನು ನೋಡಿ |