Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:20 - ಕನ್ನಡ ಸತ್ಯವೇದವು C.L. Bible (BSI)

20 ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆ ಹೊವ್ನ್, ಮಿಯಾ ತುಮ್ಕಾ ಬಗುಚೆ, ಅನಿ ತುಮ್ಚ್ಯಾಕ್ಡೆ ಬೊಲುಚೆ ಮನುನ್ ಆಶ್ಯಾ ಕರ್‍ಲೊ, ಇಸ್ರಾಯೆಲಾಂಚ್ಯಾ ಬರೊಸ್ಯಾತ್ ಮಿಯಾ ವಿಶ್ವಾಸ್ ಥವಲ್ಲ್ಯಾ ಸಾಟ್ನಿ ಹ್ಯಾ ಸರ್ಪೊಳಿಯಾನಿ ಭಾಂದುನ್ ಥವಲ್ಲಿ ಹಾತ್, ಘೆಟಲೊ ಹೊಲಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:20
18 ತಿಳಿವುಗಳ ಹೋಲಿಕೆ  

ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.


ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.


ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!


ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು.


ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು