Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಅವರು, “ನಿನ್ನ ವಿಷಯವಾಗಿ ಜುದೇಯದಿಂದ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರು ಯಾರೂ ಏನನ್ನೂ ವರದಿಮಾಡಿಲ್ಲ. ಯಾವ ದೋಷಾರೋಪಣೆಯನ್ನೂ ತಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಅವನಿಗೆ - ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ತೆಂಕಾ ಜುದೆವಾಂಚ್ಯಾಕ್ನಾ ತುಜ್ಯಾ ವಿಶಯಾತ್ ಕಸ್ಲಿ ಚಿಟ್ ಬಿ ಯೆವ್ಕ್ ನಾ ಅನಿ ತೆನಿ ತುಜ್ಯಾ ವಿಶಯಾತ್ ಕಾಯ್ಬಿ ವಾಯ್ಟ್ ಬೊಲುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:21
8 ತಿಳಿವುಗಳ ಹೋಲಿಕೆ  

ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.


ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.


ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.


ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು