Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:31 - ಕನ್ನಡ ಸತ್ಯವೇದವು C.L. Bible (BSI)

31 ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ದೆವಾಚ್ಯಾ ರಾಜಾಚ್ಯಾ ವಿಶಯಾತ್ ಶಿಕಾಪ್ ಕರಿ, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗಿತ್ ಹೊತ್ತೊ, ಅನಿ ತೊ ಉಲ್ಲೆಬಿ ಭಿಂಯ್‍ನಸ್ತಾನಾ ಹೆ ಕಾಮ್ ಕರಿತ್ ಹೊತ್ತೊ , ತೆಕಾ ಅಡ್ಡಿ ಕರುಕ್ ಕೊನಾಚೆನ್ಬಿ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:31
17 ತಿಳಿವುಗಳ ಹೋಲಿಕೆ  

ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು