Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:4 - ಕನ್ನಡ ಸತ್ಯವೇದವು C.L. Bible (BSI)

4 ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಾವ್ಲುಚ್ಯಾ ಹಾತಿಕ್ ಸುತ್ ಧರಲ್ಯಾ ಸಾಪಾಕ್ ಬಗಲಿ ದ್ವಿಪಾತ್ಲಿ ಲೊಕಾ, ಹ್ಯೊ ಖುನ್ಕಾರಿಚ್ ಹೊವ್ಕ್ ಫಿರೆ! ಸಮುಂದರಾತ್ನಾ ಚುಕುನ್ ಯೆಲ್ಯಾರ್ ಬಿ ತೆಚ್ಯಾ ನಸಿಬಾಕ್ ತೆಕಾ ಜಿವಾನಿ ಥವ್ತಲೆ ಮನ್‍ ನಾ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:4
20 ತಿಳಿವುಗಳ ಹೋಲಿಕೆ  

ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ?


ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.


ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು.


ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.


ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.


ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ತಂದು ಬೆಂಕಿಯ ಮೇಲೆ ಹಾಕುತ್ತಿದ್ದಾಗ ಬೆಂಕಿಯ ಶಾಖಕ್ಕೆ ವಿಷಸರ್ಪವೊಂದು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು