Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:12 - ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ಪೆದ್ರುನ್ ತ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಇಸ್ರಾಯೆಲಾಂಚ್ಯಾ ಲೊಕಾನು ಹೆ ಬಗುನ್ ತುಮಿ ಕಶ್ಯಾಕ್ ಅಜಾಪ್ ಹೊತ್ತ್ಯಾಶಿ? ಹೊ ಚಲುಲಾಗಲೆ ಮಾಜ್ಯಾ ತಾಕ್ತಿನ್ ಮಿಯಾ ಕರ್‍ಲಾ ಮನುನ್ ಬಗುಲ್ಯಾಸಿ ಕಾಯ್? ಅಮಿ ಬರೆ ಪಾನಾನ್ ಹೊತ್ಯಾಕ್ ಹಿ ಕಾಮಾ ಹೊವ್ಲಾತ್ ಮನುನ್ ಚಿಂತುಲ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:12
15 ತಿಳಿವುಗಳ ಹೋಲಿಕೆ  

ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.


‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು