Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:13 - ಕನ್ನಡ ಸತ್ಯವೇದವು C.L. Bible (BSI)

13 ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಬ್ರಾಹಾಮಾಚೊ, ಇಸಾಕಾಚೊ, ಅನಿ ಜಾಕೊಬಾಚೊ ದೆವ್ ತೊಚ್ ಅನಿ ಅಮ್ಚ್ಯಾ ಪುರ್ವಜ್ಯಾಂಚೊ ಸಗ್ಳ್ಯಾಂಚೊ ದೆವ್, ತೆನಿ ಅಪ್ಲೊ ಸೆವಕ್ ಜೆಜುಚಿ ಮಹಿಮಾ ಹೊಯ್ ಸಾರ್ಕೆ ಕರ್‍ಲಾ, ತಸೆ ಹೊಲ್ಯಾರ್ಬಿ ತುಮಿ ಜೆಜುಕ್ ಜಿವಾನಿ ಮಾರುಕ್ ಪಿಲಾತಾಕ್ಡೆ ಒಪ್ಸುನ್ ದಿಲ್ಯಾಸಿ ಪಿಲಾತಾನ್ ತೆಕಾ ಸೊಡುಚೆ ಮನುನ್ ತುಮ್ಚ್ಯಾಕ್ಡೆ ಬೊಲ್ಯಾರ್ಬಿ ತುಮಿ ತೆಕಾ ಸೊಡ್ಸುಕ್ ಅವಕಾಸ್ ದಿವ್ಕನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:13
46 ತಿಳಿವುಗಳ ಹೋಲಿಕೆ  

‘ನಾನು ನಿನ್ನ ಪಿತೃಗಳ ದೇವರು; ಅಬ್ರಹಾಮ, ಇಸಾಕ ಮತ್ತು ಯಕೋಬನ ದೇವರು ಆಗಿದ್ದೇನೆ’ ಎಂದು ಸರ್ವೇಶ್ವರನ ವಾಣಿ ಉಂಟಾಯಿತು. ಆಗ ಮೋಶೆ ಗಡಗಡನೆ ನಡುಗಿದನು. ಕಣ್ಣೆತ್ತಿ ನೋಡಲು ಹಿಂಜರಿದನು.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.


ಆದರೆ ಬರಬ್ಬನನ್ನೇ ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮುಖ್ಯಯಾಜಕರು ಜನರನ್ನು ಪ್ರಚೋದಿಸಿದರು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು