Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:18 - ಕನ್ನಡ ಸತ್ಯವೇದವು C.L. Bible (BSI)

18 ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗಾಗುತ್ತದೆ ಎಂದು ದೇವರು ಮೊದಲೇ ತಿಳಿಸಿದ್ದನು. ಕ್ರಿಸ್ತನು ಶ್ರಮೆ ಅನುಭವಿಸಿ ಸಾಯುವನೆಂದು ದೇವರು ತನ್ನ ಪ್ರವಾದಿಗಳ ಮೂಲಕ ಮೊದಲೇ ತಿಳಿಸಿದ್ದನ್ನು ಹೀಗೆ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾನ್ ಲೈ ಎಳಾಚ್ಯಾ ಅದ್ದಿಚ್ ಅಪ್ಲ್ಯಾ ಪ್ರವಾದ್ಯಾಂಚ್ಯಾ ಕ್ರಿಸ್ತಾನ್ ಕಸ್ಟ್ ಸೊಸುಕ್ ಪಾಜೆ ಮನುನ್ ಸಾಂಗಟಲ್ಲ್ಯಾನ್ ತೆ ಅಶೆ ಪುರಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:18
19 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು