Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:2 - ಕನ್ನಡ ಸತ್ಯವೇದವು C.L. Bible (BSI)

2 ‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಎಕ್ ಜಲ್ಮಿ ಸೊಟ್ಟೊ ಹೊತ್ತೊ ತೆಜ್ಯಾಕ್ಡೆ ಚಲುಕ್ ಹೊಯ್ನಶಿ, ತೆಸೆ ಹೊವ್ನ್ ತೆಚಿ ವಾಂಗ್ಡಿ ಲೊಕಾ ತೆಕಾ ಸದ್ದಿ ಉಕ್ಲುನ್ ಘೆವ್ನ್ ಜಾವ್ನ್ ಭಿಕ್ ಮಾಗುಸಾಟಿ ತೆಕಾ ಸುದಂರ್ ದ್ವಾರ್ ಮನ್ತಲ್ಯಾ ದಡ್ಪ್ಯಾಕ್ಡೆ ಬಸ್ವುನ್ ಥೈಯ್ತ್, ತೊ ಸೊಟ್ಟೊ ತ್ಯಾ ದಡ್ಪ್ಯಾಕ್ಡೆ ಬಸುನ್ ದೆವಾಚ್ಯಾ ಗುಡಿತ್ ಜಾಯ್ತ್ ಯೆತಲ್ಯಾಂಚ್ಯಾಕ್ಡೆ ಭಿಕ್ ಮಾಗುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:2
9 ತಿಳಿವುಗಳ ಹೋಲಿಕೆ  

ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ.


ಅವನ ನೆರೆಯವರು ಮತ್ತು ಹಿಂದೆ ಅವನು ಭಿಕ್ಷೆಬೇಡುತ್ತಿದ್ದಾಗ ಅವನನ್ನು ನೋಡಿದ್ದವರು, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೆ?” ಎಂದು ವಿಚಾರಿಸಿದರು.


ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು