Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪ್ರಭುವು ನಿಮಗೆ ಆತ್ಮಿಕ ವಿಶ್ರಾಂತಿಯನ್ನು ಕೊಡುವನು. ಆತನು ಕ್ರಿಸ್ತನನ್ನಾಗಿ ಆರಿಸಿಕೊಂಡ ಯೇಸುವನ್ನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಧನಿ ತುಮ್ಕಾ ಆತ್ಮಿಕ್ ಬಳ್ ದಿತಾ, ಅಪ್ನಿ ಕ್ರಿಸ್ತ್ ಹೊವ್ನ್ ಎಚುನ್ ಘೆಟಲ್ಯಾ ಜೆಜುಕ್ ತುಮ್ಕಾ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:20
15 ತಿಳಿವುಗಳ ಹೋಲಿಕೆ  

ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.


ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು