Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:21 - ಕನ್ನಡ ಸತ್ಯವೇದವು C.L. Bible (BSI)

21 ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಸಗ್ಳ್ಯೆಬಿ ಸಮಾ ಕರ್‍ತಲೊ ಎಳ್ ಯೆಯ್ ಪತರ್ ಜೆಜು ಸರ್‍ಗಾತುಚ್ ರ್‍ಹಾವ್ಚೊ ಮನುನ್ ದೆವಾನ್ ಅಪ್ಲ್ಯಾ ಪವಿತ್ರ್ ಪ್ರವಾದ್ಯಾಂಚ್ಯಾ ಬರ್‍ಯಾ ಖಬ್ರಿಯಾತ್ನಿ ಸಾಂಗಲ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:21
16 ತಿಳಿವುಗಳ ಹೋಲಿಕೆ  

ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು