Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:24 - ಕನ್ನಡ ಸತ್ಯವೇದವು C.L. Bible (BSI)

24 ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಸಮುವೇಲನೂ ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳ ವಿಷಯದಲ್ಲಿ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಸಮುವೇಲನು ಮತ್ತು ಅವನ ನಂತರದ ಪ್ರವಾದಿಗಳು ಇಂದಿನ ಈ ಕಾಲದ ಬಗ್ಗೆ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಾಮುಯೆಲಾಕ್ನಾ ದರುನ್ ತೆಚ್ಯಾ ಮಾನಾ ಯೆಲ್ಲ್ಯಾ ಪ್ರವಾದ್ಯಾನಿ ಅತ್ತಾಚ್ಯಾ ದಿಸಾತ್ನಿ ಕಾಯ್ ಹೊತಲೆ ಹಾಯ್ ಮನುನ್ ಸಾಂಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:24
12 ತಿಳಿವುಗಳ ಹೋಲಿಕೆ  

ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.


ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು