Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:25 - ಕನ್ನಡ ಸತ್ಯವೇದವು C.L. Bible (BSI)

25 ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಪ್ರವಾದಿಗಳ ಶಿಷ್ಯರೂ ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ - ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಪ್ರವಾದ್ಯಾನಿ ಸಾಂಗಲಿ ಸಂಗ್ತಿಯಾ ತುಮ್ಚ್ಯಾ ಪುರ್ವಜ್ಯಾಚಿ ಲೊಕಾಂಚ್ಯಾಕ್ನಾ ದೆವಾನ್ ಕರುನ್ ಘೆಟಲೊ ಕರಾರ್ ತುಮಿ ಮಾನುನ್ ಘೆಟಲ್ಲೆ ಹಾಸಿ, ತುಮ್ಚೊ ಪುರ್ವಜ್ ಮಾನುಸ್ ಅಬ್ರಾಹಾಮಾಕ್, ತುಜ್ಯಾ ಪಿಳ್ಗಿನ್ ಜಗಾತ್ಲಿ ಸಗ್ಳಿ ಲೊಕಾ ಆಶಿರ್ವಾದ್ ಘೆತಾತ್ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:25
30 ತಿಳಿವುಗಳ ಹೋಲಿಕೆ  

ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.


ಯಕೋಬನಿಗೆ ರಾಜಶಾಸನವಾಗಿ ಕೊಟ್ಟದ್ದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು: II


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II


ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು