Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:26 - ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆವಾನ್ ಮುಖ್ಯ್ ಸೆವಕ್ ಅದ್ದಿಚ್ಯಾ ಅದ್ದಿ ಮರ್ನಾಕ್ನಾ ಉಟ್ವುನ್ ತುಮ್ಕಾ ಆಶಿರ್ವಾದ್ ದಿವ್ಕ್ ಸಾಟ್ನಿ, ತುಮ್ಚ್ಯಾಕ್ಡೆ ಧಾಡುನ್ ದಿಲ್ಯಾನ್, ತೊ ತುಮ್ಚ್ಯಾ ಬುರ್ಶಾ ಕಾಮಾತ್ನಾ ದುರ್ ಕರುನ್ ತುಮ್ಕಾ ಆಶಿರ್ವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:26
41 ತಿಳಿವುಗಳ ಹೋಲಿಕೆ  

ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು