Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು,. “ಎಲ್ಲಿ, ನಮ್ಮನ್ನು ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೇತ್ರ ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು - ನಮ್ಮನ್ನು ನೋಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೇತ್ರ ಮತ್ತು ಯೋಹಾನ ಆ ಕುಂಟನಿಗೆ, “ನಮ್ಮನ್ನು ನೋಡು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪೆದ್ರುನ್ ಅನಿ ಜುವಾಂವಾಕ್ ತ್ಯಾ ಸೊಟ್ಟ್ಯಾಕುಚ್ ಬಗಟ್ಲ್ಯಾನಿ ಅನಿ ಪೆದ್ರುನ್ ತೆಕಾ “ಅಮ್ಕಾ ಬಗ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:4
11 ತಿಳಿವುಗಳ ಹೋಲಿಕೆ  

“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?


ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.


ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.


ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು.


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.


ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು.


ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು.


‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು