Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:10 - ಕನ್ನಡ ಸತ್ಯವೇದವು C.L. Bible (BSI)

10 ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್‍ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:10
16 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.


ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು