Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:13 - ಕನ್ನಡ ಸತ್ಯವೇದವು C.L. Bible (BSI)

13 ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪೆದ್ರುಕ್ ಅನಿ ಜುವಾಂವಾಕ್ ಕಸ್ಲಿಬಿ ಶಿಕಾಪಾ ಗೊತ್ತ್ ನತ್ತಿ, ಖರೆ ತೆನಿ ಉಲ್ಲೆಬಿ ಭಿಂಯೆ ನಸ್ತಾನಾ ಬೊಲುನ್ಗೆತ್ ಹೊತ್ತೆ ಬಗುನ್ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ಲೊಕಾ ಅಜಾಪ್ ಹೊಲ್ಯಾನಿ ಅನಿ ಹೆನಿ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ತೆನಿ ಯಾದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:13
22 ತಿಳಿವುಗಳ ಹೋಲಿಕೆ  

ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.


ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು.


ಆದುದರಿಂದ ಯೇಸುಸ್ವಾಮಿ ತಮ್ಮ ಶಿಷ್ಯರಾದ ಪೇತ್ರ ಹಾಗೂ ಯೊವಾನ್ನನನ್ನು ಕರೆದು, “ಹೋಗಿ, ಪಾಸ್ಕಭೋಜನ ಸಿದ್ಧಮಾಡಿರಿ,” ಎಂದರು.


ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು.


ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.


ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.


ಅಂದಿನಿಂದ ಸೌಲನು ಜೆರುಸಲೇಮಿನಲ್ಲಿ ಅವರೊಡನೆ ಕಲೆತು ಪ್ರಭುವಿನ ಹೆಸರಿನಲ್ಲಿ ನಿರ್ಭಯವಾಗಿ ಬೋಧಿಸುತ್ತಿದ್ದನು.


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು