ಅಪೊಸ್ತಲರ ಕೃತ್ಯಗಳು 4:19 - ಕನ್ನಡ ಸತ್ಯವೇದವು C.L. Bible (BSI)19 ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ತೆಂಕಾ ಪೆದ್ರುನ್ ಅನಿ ಜುವಾಂವಾಕ್, ಅಮಿ ತುಮ್ಕಾ ಮಾನುಚೆ ಕಿ? ನಾ ತರ್ ದೆವಾಕ್ ಮಾನುಚೆ? ಹ್ಯಾತುರ್ ಖಚ್ಚಿ ದೆವಾಚಿ ಇಚ್ಚಾ ತುಮಿಚ್ ಸಾಂಗಾ. ಅಧ್ಯಾಯವನ್ನು ನೋಡಿ |
ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.