Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:21 - ಕನ್ನಡ ಸತ್ಯವೇದವು C.L. Bible (BSI)

21 ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ತ್ಯಾ ಜುದೆವಾಂಚ್ಯಾ ನ್ಯಾಯ್ ಕರ್‍ತಲ್ಯಾ ಮುಖಂಡಾಂಚ್ಯಾಕ್ಡೆ ಕಸ್ಲೆಬಿ ಶಿಕ್ಷಾ ದಿವ್ಕ್ ಹೊವ್ಕ್ ನಾ, ಪೆದ್ರುಕ್ ಅನಿ ಜುವಾಂವಾಕ್ ಉಶಾರ್ಕಿ ತವ್ಡೆಚ್ ದಿಲ್ಯಾನಿ ತೆಂಕಾ ಕಶ್ಯಾಕ್ ಮಟ್ಲ್ಯಾರ್ ಥೈ ಹೊಲ್ಲಿ ಸಂಗ್ತಿಯಾ ಬಗುನ್ ಲೊಕಾ ಸಗ್ಳ್ಯಿ ದೆವಾಕ್ ಹೊಗ್ಳಾಪ್ ಕರುಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:21
18 ತಿಳಿವುಗಳ ಹೋಲಿಕೆ  

ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.


ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.


ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು.


ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು