Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:27 - ಕನ್ನಡ ಸತ್ಯವೇದವು C.L. Bible (BSI)

27 “ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆಚ್ ಬಿ ಹೆರೊದ್ ಅನಿ ಪೊಂತಿಯಸ್ ಪಿಲಾತ್ ಸಗ್ಳ್ಯಾ ಜುದೆವಾಂಚ್ಯಾ ಲೊಕಾಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲ್ ಲೊಕಾಂಚ್ಯಾ ವಾಗ್ಡಾ ಕ್ರಿಸ್ತ್ ತುಜೊ ಪವಿತ್ರ್ ಸೆವಕಾಕ್ ವಿರೊದ್ ಹೊವ್ನ್ ಶಾರಾತ್ ಗೊಳಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:27
53 ತಿಳಿವುಗಳ ಹೋಲಿಕೆ  

ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಅದೇ ಪ್ರಕಾರ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸೇರಿ ಅವರನ್ನು ಅಪಹಾಸ್ಯಮಾಡುತ್ತಾ, “ಇವನು ಇತರರನ್ನು ರಕ್ಷಿಸಿದ, ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು;


“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.


ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.


ಬಳಿಕ ಸಭೆಸೇರಿದ್ದವರೆಲ್ಲರೂ ಎದ್ದು ಯೇಸುಸ್ವಾಮಿಯನ್ನು ಪಿಲಾತನ ಬಳಿಗೆ ಕರೆದುತಂದರು.


ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು