Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:28 - ಕನ್ನಡ ಸತ್ಯವೇದವು C.L. Bible (BSI)

28 ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜುಕ್ ವಿರೊದ್ ಹೊವ್ನ್ ಗೊಳಾ ಹೊವ್ನ್ ಯೆಲ್ಲ್ಯಾ ಲೊಕಾನಿ ತೆಚಿ ಎವ್ಜುನ್ ಫುರಾ ಹೊಯ್ ಸಾರ್ಕೆ ಕರ್‍ಲ್ಯಾನಿ ತುಜ್ಯಾ ಬಳಾನ್ ಅನಿ ತುಜ್ಯಾ ಚಿತ್ತಾನ್ ಹೆ ಸಗ್ಳ್ಯೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:28
21 ತಿಳಿವುಗಳ ಹೋಲಿಕೆ  

ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.


ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು.


ಆದೇಶವಿತ್ತವನಾರು ಸರ್ವೇಶ್ವರನ ಆತ್ಮಕೆ? ಉಪದೇಶವಿತ್ತ ಸಲಹೆಗಾರನಾರು ಆತನಿಗೆ?


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು