Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:31 - ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಶೆ ದೆವಾಚಿ ಲೊಕಾ ಮಾಗ್ನಿ ಕರಿತ್ ರಾತಾನಾ ತೆಂಚೊ ತಾಂಡ್ಯಾ ಗೊಳಾ ಹೊಲ್ಲೊ ಜಾಗೊ ಥರ್ ಥರ್ಲ್ಲೊ ತೆನಿ ಸಗ್ಳ್ಯೆ ಪವಿತ್ರ್ ಆತ್ಮ್ಯಾನ್ ಭರುನ್ ದೆವಾಚಿ ಗೊಸ್ಟಿಯಾ ಭಿಂಯ್ ನಸ್ತಾನಾ ಸಾಂಗುಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:31
17 ತಿಳಿವುಗಳ ಹೋಲಿಕೆ  

ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು