Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:32 - ಕನ್ನಡ ಸತ್ಯವೇದವು C.L. Bible (BSI)

32 ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ದೆವಾಚ್ಯಾ ಲೊಕಾಂಚೊ ಮನ್ ಅನಿ ಜಿಂವ್ ಎಕುಚ್ ಹೊತ್ತಿ ತೆಂಚ್ಯಾ ಮದ್ದಿ ಕೊನ್ ಎಕ್ಲೊಬಿ ಅಪ್ನಾಕ್ಡೆ ಹೊತ್ತೆ ಅಪ್ನಾಚೆಚ್ ಮನುನ್ ಸಾಂಗಿನಸಿತ್ ತೆಚ್ಯಾ ಬದ್ಲಾಕ್ ತೆನಿ ಹರ್ ಎಕ್ ಸಾಮಾನಾ ಎಕಾಮೆಕಾಕ್ ವಾಟುನ್ ಘೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:32
21 ತಿಳಿವುಗಳ ಹೋಲಿಕೆ  

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು