ಅಪೊಸ್ತಲರ ಕೃತ್ಯಗಳು 5:12 - ಕನ್ನಡ ಸತ್ಯವೇದವು C.L. Bible (BSI)12 ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಜನರಲ್ಲಿ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಇರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆನಿ ಸಗ್ಳಿ ಲೊಕಾ ಚಮತ್ಕಾರಾಚಿ ಅನಿ ಅಜಾಪಾಚಿ ಕಾಮಾ ಕರ್‍ಲ್ಯಾನಿ ಸಗ್ಳ್ಯಾ ಲೊಕಾನಿ ತೆಂಚಿ ಕಾಮಾ ಬಗ್ಲ್ಯಾನಿ ತೆನಿ ಸಗ್ಳಿ ಲೊಕಾ ಎಕ್ ಕಡೆ ಗೊಳಾ ಹೊವ್ನ್ ಸೊಲೊಮೊನಾಚ್ಯಾ ಮಾಟ್ವಾತ್ ಮಿಳುನ್ ಯಯ್ತ್ . ಅಧ್ಯಾಯವನ್ನು ನೋಡಿ |
ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).