Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:15 - ಕನ್ನಡ ಸತ್ಯವೇದವು C.L. Bible (BSI)

15 ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊವ್ನ್ ಲೊಕಾ ಸಗ್ಳಿ ಬರೆ ನತ್ಯಾ ಮಾನ್ಸಾಕ್ನಿ ಡಾಳಿಯಾರ್ನಿ ಥವ್ನ್ ,ಪೆದ್ರು ಜಾಯ್ತ್ ರಾತಾನಾ ತೆಚಿ ಸಾವ್ಳಿ ತರಿಬಿ ತೆಂಚ್ಯಾರ್ ಪಡುಂದಿ ಮನುನ್ ತೆಂಕಾ ವಾಟೆರ್ ಹಾನುನ್ ಥೈಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:15
8 ತಿಳಿವುಗಳ ಹೋಲಿಕೆ  

ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ.


ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು.


ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು