Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:17 - ಕನ್ನಡ ಸತ್ಯವೇದವು C.L. Bible (BSI)

17 ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮುಖ್ಯ ಯಾಜಕಾ ಅನಿ ತೆಂಚಿ ವಾಂಗ್ಡಿ ಸಾದುಸೆವಾಕ್ನಿ ಅಪೊಸ್ತಲಾಂಚ್ಯಾ ವೈರ್ ಲೈ ಕುಸ್ಡೆ ಪಾನ್ ಹೊಲೆ, ಅನಿ ತೆನಿ ಹೆಂಕಾ ಕಾಯ್ ತರ್ ಕರುಚೆ ಮನುನ್ ಯವ್ಜುನ್ ಘೆಟ್ಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:17
24 ತಿಳಿವುಗಳ ಹೋಲಿಕೆ  

ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.


“ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.


ಪ್ರಧಾನಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು