Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:19 - ಕನ್ನಡ ಸತ್ಯವೇದವು C.L. Bible (BSI)

19 ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತ್ಯಾ ದಿಸಾ ರಾಚ್ಚೆ ಧನಿಯಾಚ್ಯಾ ದುತಾನ್ ಬಂದಿಖಾನ್ಯಾಚಿ ದಾರಾ ಉಗಡ್ಲ್ಯಾನ್ ಅನಿ ಅಪೊಸ್ತಲಾಕ್ನಿ ಭಾಯ್ರ್ ಬಲ್ವುನ್ ಹಾನುನ್ ತೆಂಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:19
18 ತಿಳಿವುಗಳ ಹೋಲಿಕೆ  

ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.


ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಇದ್ದಕ್ಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷ ಆಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು.


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು