Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:2 - ಕನ್ನಡ ಸತ್ಯವೇದವು C.L. Bible (BSI)

2 ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಒಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ಗಾವಲ್ಲ್ಯಾ ಪೈಸ್ಯಾತ್ ಅಪೊಸ್ತಲಾಕ್ನಿ ದಿತಾನಾ ಉಲ್ಲೆ ಪೈಸೆ ಅಪ್ನಾ ಸಾಟ್ನಿ ಮನುನ್ ನಿಪ್ವುನ್ ಥವ್ನ್ ಘೆಟಲ್ಯಾನಿ ಹೆ ತೆಜಾ ಬಾಯ್ಕೊ ಬಿ ಗೊತ್ತ್ ಅನಿ ತೆನಿ ಬಿ ಹೆಕಾ ಒಪ್ಕಿ ದಿಲ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:2
16 ತಿಳಿವುಗಳ ಹೋಲಿಕೆ  

ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಅನನೀಯ ಮತ್ತು ಸಫೈರ ಎಂಬ ದಂಪತಿಗಳಿದ್ದರು. ಇವರು ತಮ್ಮ ಆಸ್ತಿಯೊಂದನ್ನು ಮಾರಿದರು.


ಪೇತ್ರನು ಆಕೆಯನ್ನು ನೋಡಿ, “ನೀನು ಮತ್ತು ನಿನ್ನ ಪತಿ ಆಸ್ತಿಮಾರಿ ಪಡೆದ ಹಣದ ಮೊತ್ತ ಇಷ್ಟೇ ಏನು?” ಎಂದು ಕೇಳಿದನು. ಆಕೆ, “ಹೌದು, ಇಷ್ಟೇ,” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು