ಅಪೊಸ್ತಲರ ಕೃತ್ಯಗಳು 5:28 - ಕನ್ನಡ ಸತ್ಯವೇದವು C.L. Bible (BSI)28 “ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 “ಹ್ಯಾ ಮಾನ್ಸಾಚ್ಯಾ ವಿಶಯಾತ್ ಶಿಕಾಪ್ ಶಿಕ್ವುನಕಾಸಿ ಮನುನ್ ತುಮ್ಕಾ ಸಾಂಗ್ಲ್ಯಾಂವ್, ಖರೆ ತುಮಿ ಕಾಯ್ ಕರ್ಲ್ಯಾಸಿ? ಜೆರುಜಲೆಮಾತ್ ತುಮ್ಚ್ಯಾ ಶಿಕಾಪಾನಿಚ್ ಭರ್ಲ್ಯಾಸಿ, ಜೆಜುಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವೈರ್ ಘಾಲುಕ್ ಬಗುಲ್ಯಾಸಿ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |