Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:30 - ಕನ್ನಡ ಸತ್ಯವೇದವು C.L. Bible (BSI)

30 ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಮಿ ಜೆಜುಕ್ ಜಿವಾನಿ ಮಾರ್ಲ್ಯಾಸಿ ತುಮಿ ತೆಕಾ ಕುರ್ಸಾರ್ ಮಾರುನ್ ಜಿಂವ್ ಕಾಡ್ಲ್ಯಾಸಿ , ಖರೆ ದೆವಾನ್ ಮಟ್ಲ್ಯಾರ್ ಅಮ್ಚ್ಯಾ, ವಾಡ್ ವಡ್ಲಾಂಚ್ಯಾ ದೆವಾನುಚ್ ಜೆಜುಕ್ ಮರಲ್ಯಾಕ್ನಾ ಝಿತ್ತೊ ಹೊವ್ನ್ ಉಟ್ವುಲ್ಯಾನ್!,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:30
16 ತಿಳಿವುಗಳ ಹೋಲಿಕೆ  

ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅವರು ಯೆಹೂದ್ಯರ ಹಳ್ಳಿಪಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆಮರಕ್ಕೆ ನೇತುಹಾಕಿ ಕೊಂದರು.


ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I ಅವನ ಸಂತತಿಗೆ, ಯುಗಯುಗಾಂತರದವರೆಗೆ II


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು