Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:33 - ಕನ್ನಡ ಸತ್ಯವೇದವು C.L. Bible (BSI)

33 ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜುದೆವಾಂಚಿ ಮುಖಂಡಾಕ್ನಿ ಹಿ ಗೊಸ್ಟಿಯಾ ಆಯ್ಕುನ್ ತೆಂಚೊ ರಾಗ್ ಲೈ ಚವ್ತಾಳ್ಲೊ, ಅನಿ ತೆನಿ ಅಪೊಸ್ತಲಾಕ್ನಿ ಜಿವ್ ಕಾಡುಚೆ ಮನುನ್ ಯವ್ಜುನ್ ಘೆಟಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:33
20 ತಿಳಿವುಗಳ ಹೋಲಿಕೆ  

ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.


ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು