Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:36 - ಕನ್ನಡ ಸತ್ಯವೇದವು C.L. Bible (BSI)

36 ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನು ದೊಡ್ಡ ಮನುಷ್ಯನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು. ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಎಗ್ದಾ ಥೆಯೊದಾಸ್ ಮನ್ತಲ್ಯಾ ನಾವಾಚೊ ಮಾನುಸ್ ಯೆಲ್ಲೆ ತುಮ್ಕಾ ಯಾದ್ ಅಸಿಲ್? ತೆನಿ ಅಪ್ನಾಕುಚ್ ಮೊಟೊ ಮಾನುಸ್ ಮನುನ್ ಘೆಟಲ್ಲ್ಯಾನ್ ಜಗ್ಗೊಳ್-ಜಗ್ಗೊಳ್ ಚಾರ್ಸಿ ಲೊಕಾ ತೆಚ್ಯಾ ವಾಂಗ್ಡಾ ಹೊತ್ತಿ ಹೊಲ್ಯಾರ್ ಬಿ ತೆಕಾ ಮಾರುನ್ ಟಾಕಲ್ಲ್ಯಾನಿ ತೆಚಿ ವಾಂಗ್ಡಿಯಾ ಸಗ್ಳಿ ಪರ್‍ತುನ್ ಪಳುನ್ ಗೆಲೆ ತೆಂಚೆನ್ ಕಾಯ್ಬಿ ಕರುಕ್ ಹೊವ್ಕ್‌ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:36
14 ತಿಳಿವುಗಳ ಹೋಲಿಕೆ  

ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.


ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಭಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು