Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:39 - ಕನ್ನಡ ಸತ್ಯವೇದವು C.L. Bible (BSI)

39 ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ತಿ ಯವ್ಜನ್ ದೆವಾಕ್ನಾ ಯೆಲ್ಲಿ ಹೊಲ್ಯಾರ್ ತುಮಿ ತೆಂಕಾ ಅಡ್ಕಳ್ ಕರುಕ್ ಹೊಯ್ನಾ ತುಮಿ ದೆವಾಕುಚ್ ವಿರೊಧ್ ಹೊವ್ನ್ ಝಗ್ಡೊ ಕರ್‍ಲೆ ಸಾರ್ಕೆ ಹೊತಾ! ಮನುನ್ ಸಾಂಗಲ್ಯಾನ್ ತನ್ನಾ ಗಮಲಿಯೆಲಾಚ್ಯಾ ಸಲಹಾಕ್ನಿ ಜುದೆವಾಂಚ್ಯಾ ಮುಖಂಡಾನಿ ಒಪ್ಪುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:39
23 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.


ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು