Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:4 - ಕನ್ನಡ ಸತ್ಯವೇದವು C.L. Bible (BSI)

4 ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಆಸ್ತಿ ಇದ್ದಾಗ ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆಯೂ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ. ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಯಾಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ ಆಡಿದಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅದ್ದಿ ಹಿ ಆಸ್ತಿ ತುಜ್ಯಾ ನಾವಾರ್ ಹೊತ್ತೆ ನ್ಹಯ್?, ಅನಿ ತಿ ಆಸ್ತಿ ಅಶೆ ಇಕುನ್ ಗಾವಲ್ಲೆ ಪೈಸೆ ತುಜೆಚ್ ಹೊಲ್ಲೆ ಹೊತ್ತೆ ತುಜ್ಯಾ ಮನಾತ್ ಅಶೆ ಕಶ್ಯಾಕ್ ಯೆವ್ಜಲೈ? ತಿಯಾ ಮಾನ್ಸಾಕ್ ಝುಟೆ ಸಾಂಗುಕ್ ನ್ಹಯ್ ದೆವಾಕುಚ್ ಝುಟೆ ಸಾಂಗ್ಲಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:4
26 ತಿಳಿವುಗಳ ಹೋಲಿಕೆ  

ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಈ ಬೆಳ್ಳಿಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ಉದಾರಹಸ್ತದಿಂದ ಸರ್ವೇಶ್ವರನಿಗಾಗಿ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆ?” ಎಂದು ನೆರೆದ ಸಭೆಯನ್ನು ಕೇಳಿದನು.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.


ನಾವು ತಿನ್ನುವ ಆಹಾರ ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾರದು. ಅದನ್ನು ತಿನ್ನದಿರುವುದರಿಂದ ನಮಗೆ ನಷ್ಟವಿಲ್ಲ, ತಿಂದರೆ ಲಾಭವಿಲ್ಲ.


ಉದರದಲ್ಲಿ ವಂಚನೆಯನ್ನು ಗರ್ಭಧರಿಸುವರು ಕೇಡನು ಹಡೆವೆನೆಂದೆಣಿಸಿ ಶೂನ್ಯವ ಹೆರುವುದ ನೋಡು.


ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.


ಹರಕೆಮಾಡಿ ತೀರಿಸದೆ ಇರುವುದಕ್ಕಿಂತ ಹರಕೆ ಮಾಡಿಕೊಳ್ಳದಿರುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು