ಅಪೊಸ್ತಲರ ಕೃತ್ಯಗಳು 6:1 - ಕನ್ನಡ ಸತ್ಯವೇದವು C.L. Bible (BSI)1 ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುಚ್ಯಾ ಶಿಸಾಂಚೊ ಅಂಕೊ ಜಾಸ್ತಿ ಹೊವ್ನನ್ಗೆತ್ ಹೊತ್ತೊ, ಖರೆ ತ್ಯಾ ಎಳಾರ್ ಗ್ರಿಕ್ ಬೊಲ್ತಲ್ಯಾ ಅನಿ ಥೈಚ್ ರಾತಲ್ಯಾ ಜುದೆವಾಂಚ್ಯಾ ಮದ್ದಿ ಝಗ್ಡೊ ಉಟ್ಲೊ, ಗ್ರಿಕ್ ಬೊಲ್ತಲ್ಯಾ ಜುದೆವಾನಿ ಅಪ್ನಾಚ್ಯಾ ಮದ್ಲ್ಯಾ ವಿದವ್ ಬಾಯ್ಕಾಕ್ನಿ ಸದ್ದಿಚ್ಯಾ ವಾಟ್ನಿಚ್ಯಾ ಎಳಾರ್ ಧ್ಯಾನ್ ದಿವ್ನ್ ಹೊಯ್ನಾ ಹೊಲಾ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |