Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಪವಿತ್ರ್ ಆತ್ಮ್ಯಾನ್ ಸ್ತೆಪನಾಕ್ ಶಾನೆಪಾನಾನ್ ಬೊಲುಕ್ ಮಜತ್ ಕರ್‍ಲ್ಯಾನ್, ಸ್ತೆಪನಾಚಿ ಬೊಲ್ನಿ ಲೈ ಬಳಾಚಿ ಹೊವ್ನ್ ಹೊತ್ತ್ಯಾ ಸಾಟ್ನಿ ತೆಚ್ಯಾ ವಾಂಗ್ಡಾ ತೆಂಕಾ ವಾದ್ ಕರುಕ್ ಹೊಯ್ನಸ್ತಾನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:10
18 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ.


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.


ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು