ಅಪೊಸ್ತಲರ ಕೃತ್ಯಗಳು 6:11 - ಕನ್ನಡ ಸತ್ಯವೇದವು C.L. Bible (BSI)11 ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಅವರು ಕೆಲವು ಮನುಷ್ಯರಿಗೆ - ಇವನು ಮೋಶೆಗೆ ವಿರೋಧವಾಗಿಯೂ ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವದನ್ನು ಕೇಳಿದೆವೆಂದು ಹೇಳಿರಿ ಎಂಬದಾಗಿ ಬೋಧಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಸ್ತೆಫನನು ಮೋಶೆಗೂ ದೇವರಿಗೂ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುತ್ತಾನೆ; ಅವನ್ನು ನಾವೇ ಕೇಳಿದ್ದೇವೆ!” ಎಂದು ತಿಳಿಸುವಂತೆ ಕೆಲವರಿಗೆ ಹಣಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 “ಸ್ತೆಪನ್ ಮೊಯ್ಜೆಕ್ ಅನಿ ದೆವಾಕ್ ದೊಗ್ಯಾಕ್ನಿ ವಿರೊದ್ ಹೊವ್ನ್ ಬುರ್ಶಿ ಗೊಸ್ಟಿಯಾ ಸಾಂಗ್ತಾ; ತೆ ಅಮಿಚ್ ಆಯಿಕ್ಲಾವ್” ಮನುನ್ ಸಾಂಗುಚೆ ಬಗಾ ಮನುನ್ ಥೊಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಶಿಕ್ವುಲ್ಯಾನಿ. ಅಧ್ಯಾಯವನ್ನು ನೋಡಿ |