Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನರನ್ನೂ ಹಿರಿಯರನ್ನೂ ಶಾಸ್ತ್ರಿಗಳನ್ನೂ ರೇಗಿಸಿದರು; ಮತ್ತು ಬಂದು ಅವನನ್ನು ಹಿಡಿದು ಹಿರೀಸಭೆಗೆ ತೆಗೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ ಹ್ಯಾ ಜುದೆವಾನಿ ಲೊಕಾಕ್ನಿ ಜುದೆವಾಂಚ್ಯಾ ಮುಖಂಡಾಕ್ನಿ ಅನಿ ಖಾಯ್ದೆ ಶಿಕ್ವುತಲ್ಯಾಕ್ನಿ ಕಿಡ್ವುಲ್ಯಾನಿ, ತೆನಿ ಲೈ ರಾಗಾನ್ ಯೆವ್ನ್ ಸ್ತೆಪನಾಕ್ ಧರುನ್ ಜುದೆವಾಂಚ್ಯಾ ಮುಖಂಡಾಂಚ್ಯಾ ಝಡ್ತಿ ಕರ್ತಲ್ಯಾ ತಾಂಡ್ಯಾಕ್ಡೆ ಬಲ್ವುನ್ ನ್ಹೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:12
15 ತಿಳಿವುಗಳ ಹೋಲಿಕೆ  

ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು.


ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ,


ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,


ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು