Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:13 - ಕನ್ನಡ ಸತ್ಯವೇದವು C.L. Bible (BSI)

13 ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. ಆ ಸಾಕ್ಷಿಗಳು - ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತಾಡುವದನ್ನು ಬಿಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಹ್ಯಾ ಲೊಕಾಕ್ನಿ ಝುಟಿ ಸಾಕ್ಷಿ ಸಾಂಗ್ತಲ್ಯಾ ಲೊಕಾಕ್ನಿ ಬಲ್ವುನ್ ಹಾನುನ್, “ಹ್ಯೊ ಮಾನುಸ್ ಹ್ಯಾ ಪವಿತ್ರ್ ಗುಡಿಚ್ಯಾ ವಿರೊದ್ ಹೊವ್ನ್ ಅನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಚ್ಯಾಬಿ ವಿರೊದ್ ಹೊವ್ನ್ ಕನ್ನಾಬಿ ಬುರ್ಶಿ ಗೊಸ್ಟಿಯಾ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:13
11 ತಿಳಿವುಗಳ ಹೋಲಿಕೆ  

ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II


ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಯಾಜಕತ್ವ ಬದಲಾವಣೆಗೊಂಡರೆ ಧರ್ಮಶಾಸ್ತ್ರವೂ ಬದಲಾವಣೆಗೊಳ್ಳಬೇಕಾದುದು ಅಗತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು