Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:7 - ಕನ್ನಡ ಸತ್ಯವೇದವು C.L. Bible (BSI)

7 ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚಿ ಗೊಸ್ಟಿಯಾ ಲೈ ಲೊಕಾಕ್ನಿ ಜಾವ್ನ್ ಪಾವುಕ್‍ ಲಾಗ್ಲಿ, ಜೆರುಜಲೆಮಾತ್ಲ್ಯಾ ಶಿಸಾಂಚೊ ತಾಂಡೊ ಲೈ ವಾಡುನ್ಗೆತ್‍ ಯೆಲೊ, ಲೈ ಜುದೆವಾಂಚ್ಯಾ ಯಾಜಕಾನಿ ವಿಶ್ವಾಸ್ ಕರ್‍ಲ್ಯಾನಿ ಅನಿ ಮಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:7
25 ತಿಳಿವುಗಳ ಹೋಲಿಕೆ  

ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.


ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.


‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು