Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:8 - ಕನ್ನಡ ಸತ್ಯವೇದವು C.L. Bible (BSI)

8 ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ತೆಫನನು ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ತೆಫನನು (ಏಳು ಮಂದಿಯಲ್ಲಿ ಒಬ್ಬನು) ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸ್ತೆಪನ್ ದೆವಾಚ್ಯಾ ಕುರ್ಪೆನ್ ಅನಿ ಬಳಾನ್ ಭರುನ್ ಅಜಾಪಾ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:8
11 ತಿಳಿವುಗಳ ಹೋಲಿಕೆ  

ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ನಿಷ್ಠೆಯಿಂದ ಸೇವೆಸಲ್ಲಿಸುವ ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ: ಕ್ರಿಸ್ತಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನು ಪಡೆಯುತ್ತಾರೆ.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು