Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:11 - ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟ್ ಹಾಗೂ ಕಾನಾನ್ ದೇಶಗಳಲ್ಲಿ ಕ್ಷಾಮ ತಲೆದೋರಿದಾಗ ಜನರು ಕಷ್ಟಸಂಕಟಗಳಿಗೆ ಒಳಗಾದರು. ನಮ್ಮ ಪೂರ್ವಜರು ಆಹಾರವಿಲ್ಲದೆ ಅವಸ್ಥೆಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತ್ಯಾ ಇಜಿಪ್ತ್ ಅನಿ ಕಾನಾನ್ ದೆಶಾತಾತ್ನಿ, ಲೈ ಬರ್ಗಾಲ್ ಯೆವ್ನ್ ಅಮ್ಚ್ಯಾ ಪುರ್ವಜಾಕ್ನಿಬಿ ಜೆವಾನ್ ಖಾನ್ ಗಾವ್ಕ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:11
8 ತಿಳಿವುಗಳ ಹೋಲಿಕೆ  

ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II


ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.


ಬರವು ಕಾನಾನಿನಲ್ಲಿ ಘೋರವಾಗಿತ್ತು.


ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು