Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:2
29 ತಿಳಿವುಗಳ ಹೋಲಿಕೆ  

ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.


ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II


ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಯಕೋಬನು ಅವರಿಗೆ, “ಏನ್ರಪ್ಪ, ನೀವು ಯಾವ ಊರಿನವರು?” ಎಂದು ವಿಚಾರಿಸಿದನು. ಅವರು, “ನಾವು ಖಾರಾನ್ ಊರಿನವರು,” ಎಂದರು.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ಸರ್ವೇಶ್ವರ‍ಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.


ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ಪ್ರಧಾನಯಾಜಕನು, “ಇವರು ನಿನ್ನ ವಿರುದ್ಧ ಹೇಳುತ್ತಿರುವುದು ಸತ್ಯವೋ?” ಎಂದು ಸ್ತೇಫನನನ್ನು ಕೇಳಿದನು.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು