Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾತುರ್ಲ್ಯಾ ಎಕ್ಲ್ಯಾನ್ ತೆಕಾ ಅಮ್ಕಾ ಅನ್ನ್ಯಾಯ್ ಕರ್‍ತಲೊ, ನಾಹೊಲ್ಯಾರ್ ಮುಖಂಡ್ ಅನಿ ನ್ಯಾಯ್ ಕರ್ತಲೊ ಕರುನ್ ತುಕಾ ಕೊನಿ ತರಿಬಿ ಥವ್ಲಾತ್ ಕಾಯ್? ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:27
15 ತಿಳಿವುಗಳ ಹೋಲಿಕೆ  

“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ನಿರಾಕರಿಸಿದರು. ಅವನನ್ನು ತಿರಸ್ಕರಿಸಿ ಈಜಿಪ್ಟ್ ದೇಶಕ್ಕೆ ಹಿಂದಿರುಗಲು ಮನಸ್ಸು ಮಾಡಿದರು.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.


ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು