Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:32 - ಕನ್ನಡ ಸತ್ಯವೇದವು C.L. Bible (BSI)

32 ‘ನಾನು ನಿನ್ನ ಪಿತೃಗಳ ದೇವರು; ಅಬ್ರಹಾಮ, ಇಸಾಕ ಮತ್ತು ಯಕೋಬನ ದೇವರು ಆಗಿದ್ದೇನೆ’ ಎಂದು ಸರ್ವೇಶ್ವರನ ವಾಣಿ ಉಂಟಾಯಿತು. ಆಗ ಮೋಶೆ ಗಡಗಡನೆ ನಡುಗಿದನು. ಕಣ್ಣೆತ್ತಿ ನೋಡಲು ಹಿಂಜರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮ ಇಸಾಕ ಯಾಕೋಬರ ದೇವರು ಎಂದು ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರವಾಗಿ ನೋಡುವದಕ್ಕೆ ಧೈರ್ಯವಿಲ್ಲದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಧನಿಯಾನ್ ತೆಕಾ ಮಿಯಾಚ್ ತುಜ್ಯಾ ಬಾಬಾಂಚೊ ದೆವ್ ,ಅಬ್ರಾಹಾಮಾಚೊ, ಇಸಾಕಾಚೊ, ಅನಿ ಜಾಕೊಬಾಚೊ ದೆವ್ ಮಟ್ಲ್ಯಾನ್, ತನ್ನಾ ಮೊಯ್ಜೆ ತ್ಯಾ ಝಿಳಿಕ್ ಬಗುಕ್ ಬಿಂವ್ನ್ ಥರ್ ಥರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:32
23 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಭೀಕರ ದಿಗಿಲು ಉಂಟಾಯಿತು ನನ್ನೆಲುಬುಗಳೆಲ್ಲವನ್ನು ನಡುಗಿಸಿತು.


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ಇದನ್ನು ಕಂಡ ಮೋಶೆ ವಿಸ್ಮಿತನಾದನು. ಅದನ್ನು ಚೆನ್ನಾಗಿ ನೋಡಲೆಂದು ಹತ್ತಿರಕ್ಕೆ ಬಂದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು